HomeKarnatakaBIG NEWS: ಪಂಚಮಸಾಲಿ ಮೀಸಲಾತಿ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ

BIG NEWS: ಪಂಚಮಸಾಲಿ ಮೀಸಲಾತಿ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮಿಜಿ ಮತ್ತೆ ಹೋರಾಟಕ್ಕೆ ಕರೆ ಕೊಟಿದ್ದು, ಬೆಂಗಳೂರು ವ್ಯಾಪ್ತಿಯ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ನೀಡುವುದಾಗಿ ಎಚ್ಚರಿಸಿದ್ದಾರೆ.

ಬೆಂಗಳೂರಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮಾರ್ಚ್ 4ರಂದು ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ, ತಾಲುಕುಗಳಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವಂತೆ ಪಂಚಮಸಾಲಿ ಸಮುದಾಯಕ್ಕೆ ಸೂಚಿಸಿದ್ದಾರೆ.

ನಮ್ಮ ಪ್ರತಿಭಟನೆ 48ನೇ ದಿನಕ್ಕೆ ಕಾಲಿಟ್ಟಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ನಮ್ಮ ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular