BIG NEWS : ‘ಪಠ್ಯಪುಸ್ತಕ ಪರಿಷ್ಕರಣೆ’ ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ; ಸಾಹಿತಿ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

ಬೆಂಗಳೂರು : ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (Textbook Revision) ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ( Writer Baragur Ramachandrappa) ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಾಹಿತಿ ಬರಗೂರು ರಾಮಚಂದ್ರಪ್ಪ ‘ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ, ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಗೆ ನೀಡಿಲ್ಲ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ (Writer Baragur Ramachandrappa) ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (Textbook Revision) ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ರಾಜ್ಯ ಸರ್ಕಾರ (State Government) ಮುಂದಾಗಿದೆ ಎನ್ನಲಾಗಿತ್ತು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read