HomeCrimeBIG NEWS: ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ; ಅನಾಥವಾದ ಒಂದುವರೆ ತಿಂಗಳ ಕಂದಮ್ಮ

BIG NEWS: ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ; ಅನಾಥವಾದ ಒಂದುವರೆ ತಿಂಗಳ ಕಂದಮ್ಮ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.

ಸುಧಾ ಹಿರೇಮಠ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಶಿವಯ್ಯ ಹಿರೇಮಠ ಪತ್ನಿ ಸುಧಾಳ ಕತ್ತು ಹಿಸುಕಿ ಕೊಲೆಗೈದಿದ್ದು, ಕೃತ್ಯದ ಬಳಿಕ ಪರಾರಿಯಾಗಿದ್ದಾನೆ. ಮನೆಯಲ್ಲಿ ಮಗು ಅಳುತ್ತಿದ್ದ ಶಬ್ಧ ಕೇಳಿ ಅಕ್ಕಪಕ್ಕದ ಮನೆಯವರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಯ್ಯ ಹಾಗೂ ಸುಧಾ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಹತ್ಯೆಗೈದಿದ್ದು, ಈಗ ಒಂದೂವರೆ ತಿಂಗಳ ಕಂದಮ್ಮ ಅನಾಥವಾಗಿದೆ.

ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular