BIG NEWS; ಪತ್ರಕರ್ತರ ಮೇಲೆ ಚುನಾವಣಾ ಸಿಬ್ಬಂದಿಗಳಿಂದ ಹಲ್ಲೆ

ದಾವಣಗೆರೆ: ವಿಧಾನಸಭಾ ಚುನಾವಣೆ ಮತದಾನದ ವೇಳೆ ಪತ್ರಕರ್ತರ ಮೇಲೆ ಹಲ್ಲೆ ನಡೆದ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಹುಣಸಗಟ್ಟ ಗ್ರಾಮದಲ್ಲಿ ನಡೆದಿದೆ.

ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರ ಫೋಟೋ ತೆಗೆಯಲು ಹೋದಾಗ ಪತ್ರಕರ್ತ ರಮೇಶ್ ಎಂಬುವವರ ಮೇಲೆ ಚುನಾವಣಾ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪತ್ರಕರ್ತರ ಮೇಲೆ ಚುನಾವಣಾ ಸಿಬ್ಬಂದಿ ಹಲ್ಲೆ ಖಂಡಿಸಿ ಪತ್ರಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read