HomeKarnatakaBIG NEWS: ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ

BIG NEWS: ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಗದೀಶ್ ಶೆಟ್ಟರ್ ಭಗವಂತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ತಿಪ್ಪಣ್ಣಪ್ಪ ಕಮಾನೂರು ಕುಲದೇವತೆ ಮಾಣಿಕೇಶ್ವರಿ ಹೆಸರಲ್ಲಿ, ಬೋಸರಾಜು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಬಸವರಾಜ್ ಹೊರಟ್ಟಿ, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular