BIG NEWS: ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಶುವೈದ್ಯಾಧಿಕಾರಿ ಡಾ. ತಿಪ್ಪೆಸ್ವಾಮಿ, ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ರೈತ ಎಸ್. ಸ್ವಾಮಿಯಿಂದ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದರು.

ಈ ವೇಳೆ ಲೋಕಾಯುಕ್ತ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಾ. ತಿಪ್ಪೆಸ್ವಾಮಿಯನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read