BIG NEWS: ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ; ಏಪ್ರಿಲ್ 1 ರಿಂದ ಹಣ ಹೆಚ್ಚಳ…..? 6000 ರೂ. ಬದಲಿಗೆ ಸಿಗಲಿದೆ ಇಷ್ಟು ಮೊತ್ತ….!

ಈ ಬಾರಿಯ ಕೇಂದ್ರ ಬಜೆಟ್‌ ಬಗ್ಗೆ ಉದ್ಯೋಗಸ್ಥರು ಮತ್ತು ರೈತರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಫೆಬ್ರವರಿ 1ಕ್ಕೆ ಬಜೆಟ್‌ ಮಂಡನೆಯಾಗಲಿದೆ. ಆದಾಯ ತೆರಿಗೆ ವಿನಾಯಿತಿ ಹೆಚ್ಚಳ ಮಾಡಬಹುದು ಅನ್ನೋ ನಿರೀಕ್ಷೆ ಉದ್ಯೋಗಿಗಳಲ್ಲಿದೆ. ರೈತರಿಗೆ ಕೂಡ ಕೇಂದ್ರ ಸರ್ಕಾರ ಸಿಹಿ ಸುದ್ದಿ ಕೊಡುವ ನಿರೀಕ್ಷೆಯಿದೆ. 2024ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ಅನೇಕ ಜನಪರ ಭರವಸೆಗಳನ್ನು ನೀಡಬಹುದು. ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ದೊಡ್ಡ ಕೊಡುಗೆ ನೀಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರೈತರಿಗೆ ಪಿಎಂ ಕಿಸಾನ್ ನಿಧಿ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಯೋಜಿಸಿದೆ ಅಂತಾ ಹೇಳಲಾಗ್ತಿದೆ. ಸದ್ಯ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 6000 ರೂಪಾಯಿ ನೀಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆ ಇದೆ. ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಳ್ಳಬಹುದು. ರೈತರಿಗೆ ಮೂರು ಕಂತುಗಳಲ್ಲಿ ನೀಡುವ ಮೊತ್ತವನ್ನು ಈ ಬಾರಿ 4 ಕಂತುಗಳಲ್ಲಿ ನೀಡಬಹುದು ಎಂದೂ ಹೇಳಲಾಗುತ್ತಿದೆ. ಇದರಲ್ಲಿ ಪ್ರತಿ ತ್ರೈಮಾಸಿಕಕ್ಕೆ 2000 ರೂಪಾಯಿಯಂತೆ ಒಟ್ಟು 8000 ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡಲು ಕೇಂದ್ರ ಮುಂದಾಗಿದೆ ಎನ್ನಲಾಗ್ತಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತು 2023ರ ಜನವರಿಯಲ್ಲೇ ಬರುವ ನಿರೀಕ್ಷೆಯಿದೆ. ಈ ಹಿಂದೆ ಸರಕಾರದಿಂದ 12 ಕಂತುಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗಿದೆ. ಬೀಜ ಮತ್ತು ರಸಗೊಬ್ಬರಗಳ ಬೆಲೆ ನಿರಂತರವಾಗಿ ಹೆಚ್ಚುತ್ತಿರುವ ಕಾರಣ ರೈತರಿಗೆ ಹಣದ ಅವಶ್ಯಕತೆ ಇದೆ. ಪಿಎಂ ಕಿಸಾನ್ ಮೊತ್ತವನ್ನು ಹೆಚ್ಚಿಸಿದರೆ, ಏಪ್ರಿಲ್‌ನಲ್ಲಿ ಮತ್ತೆ ರೈತರ ಖಾತೆಗೆ 2000 ರೂಪಾಯಿ ಬರಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read