
ಕಾರವಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪೇಶ್ವೆ ವಂಶದವರು ಯಡಿಯೂರಪ್ಪನವರಿಗೆ ಅಧಿಕಾರ ಮಾಡಲು ಬಿಡಲಿಲ್ಲ, ಪೇಶ್ವೆ ವಂಶದವರೇ ಯಡಿಯೂರಪ್ಪನವರ ಸರ್ಕಾರವನ್ನು ತೆಗೆದರು. ಎರಡನೇ ಬಾರಿಗೆ ಯಡಿಯೂರಪ್ಪ ಕಷ್ಟ ಪಟ್ಟು ಸಿಎಂ ಆದರು. ಆದ್ರೆ ಅವರನ್ನು ಹೇಗೆ ನಡೆಸಿಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
ಇನ್ನು ಕುಟುಂಬ ರಾಜಕಾರಣದ ಬಗ್ಗೆ ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ. ವಂಶಾಡಳಿತ ಬಿಜೆಪಿಯಲ್ಲಿ, ಕಾಂಗ್ರೆಸ್ ನಲ್ಲಿ ಇಲ್ಲವೇ ? ಅನಗತ್ಯವಾಗಿ ನನ್ನ ಕುಟುಂಬದ ಮೇಲೆ ಟಾರ್ಗೆಟ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

