BIG NEWS: ಪ್ರಚಾರದ ವೇಳೆ ಪದ್ಮಶ್ರೀ ಪುರಸ್ಕೃತರ ಭೇಟಿ; ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡರ ಆಶೀರ್ವಾದ ಪಡೆದ ಮೋದಿ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಚಾರದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂಕೋಲಾದಲ್ಲಿ ಪದ್ಮಶ್ರೀ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಸಾರ್ವಜನಿಕ ಸಭೆಗೂ ಮುನ್ನ ಪ್ರಧಾನಿ ಮೋದಿ ಪದ್ಮ ಪುರಸ್ಕೃತರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಪರಿಸರವಾದಿ ತುಳಸಿ ಗೌಡ ಅವರಿಗೆ 2021 ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೌರವ ನೀಡಲಾಗಿದೆ. ಹೊನ್ನಾಳಿ ಗ್ರಾಮದವರಾದ ತುಳಸಿಗೌಡರು 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಅರಣ್ಯ ಇಲಾಖೆಯ ನರ್ಸರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರು ಕರ್ನಾಟಕದ ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ ಮತ್ತು ವೈವಿಧ್ಯಮಯ ಸಸ್ಯಗಳು ಮತ್ತು ಗಿಡಮೂಲಿಕೆಗಳ ಬಗ್ಗೆ ಅಪಾರ ಜ್ಞಾನದಿಂದಾಗಿ ಅರಣ್ಯದ ವಿಶ್ವಕೋಶ ಎಂದೇ ಖ್ಯಾತರಾಗಿದ್ದಾರೆ.

ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದ ನೈಟಿಂಗೇಲ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸುಕ್ರಿ ಬೊಮ್ಮಗೌಡ ಅವರು 2017 ರಲ್ಲಿ ಜಾನಪದ ಗಾಯನಕ್ಕಾಗಿ ದೇಶದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿ ಗೌರವ ಸ್ವೀಕರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read