HomeKarnatakaBIG NEWS: ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರಿಗೆ ಶುಭವಾಗಲಿ ಎಂದ ಡಿ.ಕೆ.ಶಿವಕುಮಾರ್

BIG NEWS: ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರಿಗೆ ಶುಭವಾಗಲಿ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಗೆ ವಿಳಂಬವಾಗುತ್ತಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯವರು ಸದನದ ಒಳಗೂ, ಹೊರಗೂ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ನಾಯಕರಿಗೆ ಶುಭವಾಗಲಿ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದನದ ಒಳಗೆ, ಹೊರಗೆ ಎರಡೂ ಕಡೆ ಪ್ರತಿಭಟನೆ ಮಾಡುತ್ತಿರುವುದು ಒಳ್ಳೆಯದೇ. ಅವರೇ ನಮ್ಮ ಯೋಜನೆಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಏನೇ ಮಾಡಿದ್ರೂ ನಮ್ಮಿಂದ ಲೋಪ ಆಗಲ್ಲ. ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ತೀವಿ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular