HomeKarnatakaBIG NEWS: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

BIG NEWS: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ನೀಲಮ್ಮ ದಾನಪ್ಪಗೌಡ (58) ಮೃತ ಮಹಿಳೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನೆ ಬಳಿಕ ಊರಿಗೆ ಮರಳಿದ್ದ ಶಿವಮೊಗ್ಗ ಮೂಲದ ಅಂಗನವಾಡಿ ಸಹಾಯಕಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಕಳೆದ ಮೂರು ದಿನಗಳಿಂದ ಚಳಿ, ಬಿಸಿಲು ಎನ್ನದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ, ಕನಿಷ್ಠ ಪಕ್ಷ ಅವರ ಸಮಸ್ಯೆಯನ್ನು ಆಲಿಸುವ ಸೌಜನ್ಯವಾದರೂ ರಾಜ್ಯ ಸರ್ಕಾರಕ್ಕೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಮಾತುಕತೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೇ ಮಾಡದೆ, ಏಕಾಏಕಿ ಪ್ರತಿಭಟನಾನಿರತ ಮೇಲೆ ಬಲಪ್ರಯೋಗ ಮಾಡುವುದು, ಬಂಧಿಸುವುದು ರಾಜ್ಯ ಸರ್ಕಾರದ ದಾರ್ಷ್ಟ್ಯವನ್ನು ತೋರುತ್ತದೆ. “ಆರುವ ಮೊದಲು ದೀಪ ಜೋರಾಗಿ ಉರಿಯುತ್ತದೆಯಂತೆ, ಬಿಜೆಪಿ ಸರ್ಕಾರವೂ ಹಾಗೆ” ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular