ಬೆಂಗಳೂರು: ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ…..!! ಎಂದು ಸಿಎಂ ಬೊಮ್ಮಾಯಿ ಪೋಸ್ಟರ್ ಹಾಕುವ ಮೂಲಕ ಕಮಿಷನ್ ಸರ್ಕಾರದ ಬಗ್ಗೆ ಕಾಲೆಳೆದಿದೆ.
ಬಿಜೆಪಿಗರದ್ದು ಗೋ ಪ್ರೀತಿಯಲ್ಲ, Go ಪ್ರೀತಿ!! ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ! ಅವರದ್ದು 40% ಲವ್ ಎಂದು ಟ್ಯಾಗ್ ಲೈನ್ ಹಾಕುವ ಮೂಲಕ ಪಶುಸಂಗೋಪಾನಾ ಸಚಿವ ಪ್ರಭು ಚೌಹಾಣ್ ಅವರಿಗೂ ಟಾಂಗ್ ನೀಡಿದೆ.
ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ ವಿರುದ್ಧವೂ ಕಟಕಿಯಾಡಿರುವ ಕಾಂಗ್ರೆಸ್, ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು,
ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು, ಸಿಎಂ ಮನೆಗೆ ಕಲ್ಲು ಹೊಡೆಯುವುದು, ರೈತರಿಗೆ ಅವಮಾನಿಸುವುದು…ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ! ಎಂದು ಟೀಕಿಸಿದೆ.
ಬಿಜೆಪಿಗರದ್ದು ಗೋ ಪ್ರೀತಿಯಲ್ಲ,
Go ಪ್ರೀತಿ!!ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ!#40PercentLove pic.twitter.com/SH4rO9n4eo
— Karnataka Congress (@INCKarnataka) February 14, 2023