HomeKarnatakaBIG NEWS: ಫೆಬ್ರವರಿ 27ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ; ಪ್ರಧಾನಿ ಮೋದಿಯೇ ಮೊದಲ ಪ್ರಯಾಣಿಕ

BIG NEWS: ಫೆಬ್ರವರಿ 27ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ; ಪ್ರಧಾನಿ ಮೋದಿಯೇ ಮೊದಲ ಪ್ರಯಾಣಿಕ

ಶಿವಮೊಗ್ಗ: ಶಿವಮೊಗ್ಗ, ಮಲೆನಾಡು ಭಾಗದ ಜನರ ಬಹು ದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಉದ್ಘಾಟನೆಗೆ ಸಜ್ಜುಗೊಂಡಿದೆ. ಫೆ.27ರಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣ ಉದ್ಘಾಟಸಿಸಲಿದ್ದಾರೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದ ದಿನದಂದೇ ಅವರ ಕನಸಾದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳುತ್ತಿರುವುದು ವಿಶೇಷ.

ಪ್ರಧಾನಿ ನರೇಂದ್ರ ಮೋದಿಯವರೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ಪ್ರಯಾಣಿಕ. ಫೆ.27ರಂದು ಪ್ರಧಾನಿ ಮೋದಿಯವರು ದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಈ ಮೂಲಕ ಶಿವಮೊಗ್ಗ ಏರ್ ಪೋರ್ಟ್ ಜನಸೇವೆಗೆ ಲಭ್ಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular