BIG NEWS: ಬಂಧನದ ಭೀತಿಯಲ್ಲಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದೆ.

ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಸೇರಿದಂತೆ ಐವರನ್ನು ಲೋಕಾಯುಕ್ತ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೇಳೆ ಅವರುಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದರ ಮಧ್ಯೆ ಪ್ರಶಾಂತ್ ತಮ್ಮ ತಂದೆಯವರ ಪರವಾಗಿ ಹಣ ಸ್ವೀಕರಿಸುತ್ತಿದ್ದರು ಎನ್ನಲಾಗಿದ್ದು, ಹೀಗಾಗಿ ಪ್ರಕರಣದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರನ್ನೂ ಸಹ ಆರೋಪಿಯನ್ನಾಗಿ ಮಾಡಲಾಗಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಮಾಡಾಳು ವಿರೂಪಾಕ್ಷಪ್ಪನವರ ಬಂಧನವಾಗಬಹುದು ಎಂದು ಹೇಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read