HomeKarnatakaBIG NEWS: ಬಜರಂಗದಳ - ಮುಸ್ಲಿಂ ಯುವಕನ ನಡುವೆ ವಾಗ್ವಾದ-ಗಲಾಟೆ; ಪೊಲೀಸರಿಂದ ಲಾಠಿ ಪ್ರಹಾರ

BIG NEWS: ಬಜರಂಗದಳ – ಮುಸ್ಲಿಂ ಯುವಕನ ನಡುವೆ ವಾಗ್ವಾದ-ಗಲಾಟೆ; ಪೊಲೀಸರಿಂದ ಲಾಠಿ ಪ್ರಹಾರ

ಬೇಲೂರು: ಹಾಸನದ ಬೇಲೂರಿನ ಚನ್ನಕೇಶವ ದೇವರ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗಲಾಟೆ ನಡೆದು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ.

ಏಪ್ರಿಲ್ 4ರಿಂದ ಚನ್ನಕೇಶವ ರಠೋತ್ಸವ ನಡೆಯಲಿದ್ದು, ಈ ವೇಳೆ ಕುರಾನ್ ಪಠಣ ಮಾಡಬಾರದು ಎಂದು ಒತ್ತಾಯಿಸಿ ಬಜರಂಗದಳ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಬೈಕ್ ನಲ್ಲಿ ಬಂದ ಮುಸ್ಲಿಂ ಯುವಕನೊಬ್ಬ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಬಜರಂಗದಳ ಕಾರ್ಯಕರ್ತರು ಹಾಗೂ ಯುವಕನ ನಡುವೆ ವಾಗ್ದಾವ ನಡೆದಿದೆ. ಯುವಕನನ್ನು ಬೆನ್ನಟ್ಟಿಸಿಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular