HomeKarnatakaBIG NEWS: ಬಸ್ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ; ಆರೋಪಿ ಅರೆಸ್ಟ್

BIG NEWS: ಬಸ್ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ; ಆರೋಪಿ ಅರೆಸ್ಟ್

ಮಂಗಳೂರು: ಬಸ್ ನಲ್ಲಿ ಮಹಿಳಾ ಸಹಪ್ರಯಾಣಕಿ ಜೊತೆ ಅನುಚಿತ ವರ್ತನೆ ತೋರಿದ ಪ್ರಕರಣ ಸಂಬಂಧ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಬಂಧಿತ ಆರೋಪಿ. ಬಂಟ್ವಾಳ ಮೂಲದ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಭಟ್ ನನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪ್ಪಳದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಹಿಳೆಯೊಂದಿಗೆ ಸುಬ್ರಹ್ಮಣ್ಯ ಭಟ್ ಅನುಚಿತವಾಗಿ ವರ್ತಿಸಿದ್ದರು. ಮಹಿಳೆ ಪ್ರಶ್ನಿಸಿದ್ದಕ್ಕೆ ಬೋಳುವಾರಿನಲ್ಲಿ ಬಸ್ ನಿಂದ ಇಳಿದಿದ್ದ. ಈ ಬಗ್ಗೆ ವಿಡಿಯೋ ಸಮೇತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular