HomeKarnatakaBIG NEWS: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡುತ್ತೇವೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

BIG NEWS: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡುತ್ತೇವೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯವಾಗಲಿದೆ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರು 200 ಯುನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಾರೋ ಅವರೆಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ. ಬಾಡಿಗೆದಾರರಿಗೂ ಇದು ಅನ್ವಯವಾಗಲಿದೆ. ಆದರೆ ಯಾವುದೇ ವಾಣಿಜ್ಯ ಅಥವಾ ಕಮರ್ಷಿಯಲ್ ಬಳಕೆದಾರರಿಗೆ ಉಚಿತ ವಿದ್ಯುತ್ ಇಲ್ಲ ಎಂದು ಹೇಳಿದರು.

ಬಿಜೆಪಿ ನಾಯಕರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಬರಿ ಲೂಟಿ ಮಾಡಿದರು. ಅವರು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದಾರಾ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular