
ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಕೂಡ್ಲಿಗಿ ಕ್ಷೇತ್ರದ ಶಾಸಕರಾಗಿದ್ದ ಗೋಪಾಲಕೃಷ್ಣ, ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.
ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

