HomeKarnatakaBIG NEWS: ಬಿಜೆಪಿಗೆ ಬೆಂಬಲ ಘೋಷಿಸಿದ ಎಲ್.ಆರ್.ಶಿವರಾಮೇಗೌಡ

BIG NEWS: ಬಿಜೆಪಿಗೆ ಬೆಂಬಲ ಘೋಷಿಸಿದ ಎಲ್.ಆರ್.ಶಿವರಾಮೇಗೌಡ

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಬಿಜೆಪಿಗೆ ಬೆಂಬಲ ಘೋಷಿಸಿದ್ದು, ಶೀಘ್ರದಲ್ಲಿ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

ನಾಗಮಂಗಲ ಸಮಾವೇಶದಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಸಮ್ಮುಖದಲ್ಲಿ ಎಲ್.ಆರ್.ಶಿವರಾಮೇಗೌಡ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾಗಮಂಗಲ ಬಿಜೆಪಿಯಿಂದ ದೂರ ಉಳಿದಿತ್ತು. ಈ ಕ್ಷೇತ್ರಕ್ಕೆ ಬಿಜೆಪಿ ಅಗತ್ಯವಿದೆ. ಈ ರಾಜ್ಯ, ದೇಶಕ್ಕೆ ಬಿಜೆಪಿ ಬೇಕಿದೆ ಎಂದರು.

ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ನನಗೆ ಲೋಕಸಭೆಗೆ ಬಿ ಫಾರಂ ನೀಡಿದರು. ಆದರೆ ಚುನಾವಣೆಯಲ್ಲಿ ನಾನು ಸೋತೆ. ಬಳಿಕ ಜೆಡಿಎಸ್ ಗೆ ಸೇರ್ಪಡೆಯಾದೆ. ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ನನ್ನನ್ನು ಬಳಸಿಕೊಂಡರು. ಜೆಡಿಎಸ್ ಭದ್ರ ಕೋಟೆಯಾಗಿರುವ ಮಂಡ್ಯದಲ್ಲಿಯೂ ಕಮಲ ಅರಳ ಬೇಕು. ಈ ಬಾರಿ ನಾಗಮಂಗಲ ಸೇರಿ ಮಂಡ್ಯದ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುತ್ತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular