HomeKarnatakaBIG NEWS: ಬಿಜೆಪಿಗೆ ಮತ್ತೊಂದು ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಶಾಸಕ

BIG NEWS: ಬಿಜೆಪಿಗೆ ಮತ್ತೊಂದು ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಶಾಸಕ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಆಡಳಿತಾರೂಢ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಕೂಡ್ಲಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.

ಹಲವು ದಿನಗಳಿಂದ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತಿತ್ತು. ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯ ಸಂದರ್ಭದಲ್ಲಿ ಶಾಸಕ ಗೋಪಾಲಕೃಷ್ಣ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಇಮ್ಮಡಿಗೊಳಿಸಿದೆ. ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular