
ಅಥಣಿ ಕ್ಷೇತ್ರದ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ರಾಜಿನಾಮೆ ಘೋಷಿಸಿರುವ ಬೆನ್ನಲ್ಲೇ ಇದೀಗ ಬೆಳಗಾವಿಯ ಇನ್ನೋರ್ವ ಬಿಜೆಪಿ ನಾಯಕ ರಾಜೀನಾಮೆಗೆ ಮುಂದಾಗಿದ್ದಾರೆ.
ಬೈಲಹೊಂಗಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಡಾ. ವಿಶ್ವನಾಥ್, ಬಿಜೆಪಿಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಬೈಲಹೊಂಗಲದಲ್ಲಿ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಜಗದೀಶ್ ಮೆಟಗುಡ್ಡಗೆ ಮಣೆ ಹಾಕಲಾಗಿದೆ. ಇದರಿಂದ ಬೆಂಬಲಿಗರೊಂದಿಗೆ ಬಿಜೆಪಿ ತೊರೆಯಲು ತೀರ್ಮಾನಿಸಿದ್ದರೆ ಎಂದು ತಿಳಿದುಬಂದಿದೆ.

