HomeKarnatakaBIG NEWS: ಬಿಜೆಪಿಯವರು ರೌಡಿಗಳ ಜೊತೆ ರಾಮರಾಜ್ಯ ಕಟ್ಟಲು ಹೊರಟಿದ್ದಾರಾ.....? ಪ್ರಿಯಾಂಕ್ ಖರ್ಗೆ ವಾಗ್ದಾಳಿ

BIG NEWS: ಬಿಜೆಪಿಯವರು ರೌಡಿಗಳ ಜೊತೆ ರಾಮರಾಜ್ಯ ಕಟ್ಟಲು ಹೊರಟಿದ್ದಾರಾ…..? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಸರ್ಕಾರ ಏನನ್ನೂ ಸಾಧಿಸಿಲ್ಲ: ಪ್ರಿಯಾಂಕ್ ಖರ್ಗೆ- Kannada Prabha

ಕಲಬುರ್ಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಸಂಚು ರೂಪಿಸಿದ್ದಾನೆ. ಈ ಸಂಚಿನ ಹಿಂದೆ ಬಿಜೆಪಿ, ಆರ್ ಎಸ್ ಎಸ್ ನ ಕೆಲ ನಾಯಕರು ಇದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಮಾರಾಟ ಆಗಿದೆ. ಖರ್ಗೆ ಹತ್ಯೆಗೆ ಮಣಿಕಂಠ ರಾಠೋಡ್ ಸಂಚು ರೂಪಿಸಿದ್ದಾನೆ. ರೌಡಿ ಶೀಟರ್ ಗೆ ಟಿಕೆಟ್ ನೀಡಲಾಗಿದೆ. ಬಿಜೆಪಿಯವರು ಫೈಟರ್ ರವಿ, ಸೈಲೆಂಟ್ ಸುನೀಲ್ ಸೇರಿಸಿಕೊಂಡು ರೌಡಿ ಮೋರ್ಚಾ ರಚಿಸಿದ್ದಾರೆ. ಬಿಜೆಪಿಯವರು ರೌಡಿಗಳ ಜೊತೆ ರಾಮರಾಜ್ಯ ಕಟ್ಟಲು ಹೊರಟಿದ್ದಾರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಣಿಕಂಠ ರಾಠೋಡ್ ಬೆದರಿಕೆ ಹಾಕಿರುವ ಆಡಿಯೋ ಬಗ್ಗೆ ತನಿಖೆ ನಡೆಸಬೇಕು ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಇದೇ ವೇಳೆ ಖರ್ಗೆ ಬೆಂಬಲಿಗರು, ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಬಿಜೆಪಿಯವರು ಸೋಲುವ ಭೀತಿಯಿಂದ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular