HomeKarnatakaBIG NEWS: ಬಿಜೆಪಿ ಅಣೆಕಟ್ಟು ಒಡೆದು ನೀರು ಹೊರ ಬರುತ್ತಿರುವುದಕ್ಕೆ ಕಮಲ ಮುಖಂಡರ ಕಾಂಗ್ರೆಸ್ ಸೇರ್ಪಡೆಯೇ...

BIG NEWS: ಬಿಜೆಪಿ ಅಣೆಕಟ್ಟು ಒಡೆದು ನೀರು ಹೊರ ಬರುತ್ತಿರುವುದಕ್ಕೆ ಕಮಲ ಮುಖಂಡರ ಕಾಂಗ್ರೆಸ್ ಸೇರ್ಪಡೆಯೇ ಸಾಕ್ಷಿ; ಡಿ.ಕೆ. ಶಿವಕುಮಾರ್ ಟಾಂಗ್

ಬೆಂಗಳೂರು: ಚಿತ್ತಾಪುರ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಸೇರಿದಂತೆ ಕಲ್ಯಾಣ ಕರ್ನಾಟಕ್ ಭಾಗದ ಹಲವು ಬಿಜೆಪಿ ಮುಖಂಡರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯ ಲಿಂಗಾಯಿತ ಆಣೆಕಟ್ಟು, ಕೆರೆ ಎಲ್ಲವೂ ಒಡೆದು ಹೋಗಿವೆ. ನೀರಿ ಹರಿದು ಬರುತ್ತಿವೆ ಎಂಬುದಕ್ಕೆ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದೇ ಸಾಕ್ಷಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜಾಪುರ, ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರಿದ್ದಾರೆ. ಚಿತ್ತಾಪುರ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ವಿಶ್ವನಾಥ ಪಾಟೀಲ್ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಇವರ ಜತೆಗೆ ಜಿಲ್ಲಾ ಪಂಚಾಯ್ತಿಯಲ್ಲಿ ವಿವಿಧ ಸ್ಥಾನಗಳಲ್ಲಿ ಕೆಲಸ ಮಾಡಿದ್ದ ಅರವಿಂದ್ ಚೌಹಾಣ್ ಅವರು ಸೇರಿದಂತೆ ಅನೇಕ ನಾಯಕರು, ಶಿವಾನಂದ ಪಾಟೀಲ್ ಸೇರಿ ಹಲವು ಮುಖಂಡರು ಇಂದು ಪಕ್ಷ ಸೇರುತ್ತಿದ್ದಾರೆ. ರಾಜ್ಯದಲ್ಲಿ ಈಗ ಬದಲಾವಣೆಯ ಕಾಲ ಆರಂಭವಾಗಿದ್ದು, ಭ್ರಷ್ಟಾಚಾರ ಬಡಿದೋಡಿಸುವ ಕಾಲ ಸನ್ನಿಹಿತವಾಗಿದೆ. ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular