HomeKarnatakaBIG NEWS: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಲಿಂಗಾಯಿತರೇ ಸಿಎಂ ಆಗ್ತಾರೆ; ಸಚಿವ ಸಿ.ಸಿ. ಪಾಟೀಲ್ ಹೇಳಿಕೆ

BIG NEWS: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಲಿಂಗಾಯಿತರೇ ಸಿಎಂ ಆಗ್ತಾರೆ; ಸಚಿವ ಸಿ.ಸಿ. ಪಾಟೀಲ್ ಹೇಳಿಕೆ

ಗದಗ: ಈ ಬಾರಿ ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಲಿಂಗಾಯಿತರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಸಿ.ಪಾಟೀಲ್, ರಾಜ್ಯದ 130 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಲಿಂಗಾಯಿತರೇ ಮತ್ತೆ ಸಿಎಂ ಆಗಲಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಒಂದೇ ಸಮುದಾಯದಿಂದ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಎಲ್ಲಾ ಸಮುದಾಯದವರೂ ಸರ್ಕಾರದಲ್ಲಿರಬೇಕು. ಮೇ 13ರಂದು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಮೇ 18ರಂದು ಹೊಸ ಮುಖ್ಯಮಂತ್ರಿ ಆಯ್ಕೆಯಾಗಲಿದ್ದಾರೆ. ಯಾರ ಹಣೆಯಲ್ಲಿ ಬರೆದಿದೆಯೋ ಅವರು ಮುಖ್ಯಮಂತ್ರಿ ಆಗ್ತಾರೆ. ಲಿಂಗಾಯಿತರೇ ಆದರೆ ಒಳ್ಳೆಯದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular