HomeKarnatakaBIG NEWS: ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ಕಲ್ಲು ತೂರಾಟ; ನಾಮಪತ್ರ ಸಲ್ಲಿಕೆ ವೇಳೆ ಘಟನೆ

BIG NEWS: ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ಕಲ್ಲು ತೂರಾಟ; ನಾಮಪತ್ರ ಸಲ್ಲಿಕೆ ವೇಳೆ ಘಟನೆ

ಗದಗ: ವಿಧಾನಸಭಾ ಚುನಾವಣೆಗೆ ಇಂದು ರಾಜಕೀಯ ಪಕ್ಷಗಳ ಘಟಾನುಘಟಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಗದಗದಲ್ಲಿ ನಡೆದಿದೆ.

ಗದಗ ಬಿಜೆಪಿ ಅಭ್ಯರ್ಥಿ ಅನೀಲ್ ಮೆಣಸಿನಕಾಯಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿಗೆ ತೆರಳಿದ್ದರು. ಈ ವೇಳೆ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಕಾರು ಜಖಂಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ,ಅನೀಲ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular