BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸಿರುವ ಅಭ್ಯರ್ಥಿಗಳು ಭಾಷಣದ ವೇಳೆ ಮಾತಿನ ಹಿಡಿತ ತಪ್ಪುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಯೊಬ್ಬರು ಚುನಾವಣ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಸಂಸದೆ ಸುಮಲತಾ ಅಂಬರೀಷ್ ಅವರ ಆಪ್ತ ಶ್ರೀರಂಗಪಟ್ಟಣದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಏಪ್ರಿಲ್ 29ರಂದು ಬಹಿರಂಗ ಸಭೆಯಲ್ಲಿ ಕೋಮು ಸೌಹಾರ್ದತೆ ಕದಡುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಚ್ಚಿದಾನಂದ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read