BIG NEWS: ಬಿಜೆಪಿ ಆಡಳಿತದಲ್ಲಿ ವಿಧಾನಸೌಧ ಶಾಪಿಂಗ್ ಮಾಲ್‌ನಂತಾಗಿದೆ; ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿಗ್ಗಾ ಮುಗ್ಗಾ ವಾಗ್ದಾಳಿ

ಬೆಂಗಳೂರು: ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ. ವಿಧಾನಸೌಧ ಈಗ ಅಕ್ರಮ ಡೀಲಿಂಗ್‌ಗಳ ಅಡ್ಡೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ವಿಧಾನಸೌಧಕ್ಕೆ 10.5 ಲಕ್ಷ ಹಣವನ್ನು PWD ಇಂಜಿನಿಯರ್ ತಂದಿದ್ದೇಕೆ? ಆ ಹಣ ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ? 40% ಕಮಿಷನ್ ಲೂಟಿಯ ಹಣವೋ? ಸಿಎಂ ಬೊಮ್ಮಾಯಿ ಉತ್ತರಿಸಬೇಕು ಎಂದು ಆಗ್ರಹಿಸಿದೆ.

ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು. ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ. ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ ಎಂದು ಗುಡುಗಿದೆ.

ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಂದಿರುವುದಕ್ಕೂ ಸಂಬಂಧವಿದೆಯೇ? 40% ಕಮಿಷನ್‌ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ? ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ? ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ? ಎಂದು ಪ್ರಶ್ನಿಸಿದೆ. ಈ ಮೂಲಕ ಬಿಜೆಪಿ ಟ್ವೀಟ್ ಗೆ ರಿಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದೆ.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ವಿಧಾನಸೌಧ ಶಾಪಿಂಗ್ ಮಾಲ್‌ನಂತಾಗಿದೆ. ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ, ‘40% ಕಮಿಷನ್ ಕಡ್ಡಾಯ’ದೊಂದಿಗೆ ಇಲ್ಲಿ ಎಲ್ಲವೂ ಮಾರಾಟಕ್ಕಿದೆ. ಈ ಶಾಪಿಂಗ್ ಮಾಲಿನಲ್ಲಿ ಲಕ್ಷ, ಕೋಟಿಗಳ ವ್ಯವಹಾರಗಳು ಸಲೀಸಾಗಿ ನಡೆಯುತ್ತಿವೆ. ಸಿಕ್ಕಿಬಿದ್ದ 10 ಲಕ್ಷ ರೂ. ಇದೆಲ್ಲದಕ್ಕೂ ಸಾಕ್ಷಿಯಾಗಿ ನಿಂತಿದೆ.

ಕರ್ನಾಟಕ ಬಿಜೆಪಿ ಸರ್ಕಾರದ ಆಡಳಿತ ಇಡೀ ದೇಶದಲ್ಲೇ ಅತ್ಯಂತ ‘ಭ್ರಷ್ಟ ಆಡಳಿತ’ ಎನ್ನುವ ಹೆಗ್ಗಳಿಕೆ ಪಡೆದಿದೆ! ಪಂಚಾಯಿತಿಯಿಂದ ವಿಧಾನಸೌಧದ ವರೆಗೂ ಲಂಚವಿಲ್ಲದೇ ಯಾವ ಕೆಲಸಗಳೂ ಆಗುತ್ತಿಲ್ಲ. ವಿಧಾನಸೌಧದಲ್ಲೇ ಸೆಟಲ್‌ಮೆಂಟ್‌ಗಳು ನಡೆಯುತ್ತಿವೆ, ಸರ್ಕಾರದಲ್ಲಿ ನಡೆಯುವ ಎಲ್ಲ ಭ್ರಷ್ಟಾಚಾರಗಳನ್ನು ಮುಚ್ಚಿಹಾಕಲಾಗುತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

https://twitter.com/INCKarnataka/status/1610947002107572224

https://twitter.com/INCKarnataka/status/1610941802500046848

https://twitter.com/INCKarnataka/status/1610937103755665408

https://twitter.com/INCKarnataka/status/1610931926248099841

https://twitter.com/INCKarnataka/status/1610923359851929600

https://twitter.com/INCKarnataka/status/1610915826802233345

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read