BIG NEWS: ಬಿಜೆಪಿ ತೊರೆಯಲಿರುವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ಶಿರಸಿಗೆ ತೆರಳಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ಶಾಸಕತ್ವದ ರಾಜೀನಾಮೆ ಸಲ್ಲಿಸಲಿರುವ ಶೆಟ್ಟರ್, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಗುಡ್ ಬೈ ಹೇಳಲಿದ್ದಾರೆ.

ಬಳಿಕ ತಮ್ಮ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿದ್ದು, ಬಹುತೇಕ ಅವರು ಕಾಂಗ್ರೆಸ್ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಹೀಗಾಗಿಯೇ ಶನಿವಾರ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಪಕ್ಷ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ.

ಈಗಾಗಲೇ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ಅಥಣಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಅದೇ ರೀತಿ ಜಗದೀಶ್ ಶೆಟ್ಟರ್ ಕೂಡ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಬಹುದು ಎನ್ನಲಾಗಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಸೇರ್ಪಡೆಗೊಂಡರೆ ಹಲವು ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನುಕೂಲವಾಗಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read