BIG NEWS: ಬಿಜೆಪಿ ನಾಯಕರಿಗೆ ಚೆಕ್ ಮೇಟ್ ಕೊಟ್ಟ ಮಾಜಿ ಸಿಎಂ; ಲಿಂಗಾಯಿತ ಮುಖಂಡರ ಸಭೆ ಕರೆದ ಜಗದೀಶ್ ಶೆಟ್ಟರ್

Jagadish Shettar to resign from BJP on April 16 morning Karnataka Election 2023: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಗುಡ್‌ಬೈ Vistara News

ಹುಬ್ಬಳ್ಳಿ: ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಪಣ ತೊಟ್ಟಿರುವ ಬಿಜೆಪಿ ನಾಯಕರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಇನ್ನಿಲ್ಲದ ಕಸರತ್ತು ನಡೆಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವೀರಶೈವ ಲಿಂಗಾಯಿತ ಮುಖಂಡರ ಸಭೆ ನಡೆಸಿದ ಬೆನ್ನಲ್ಲೇ ಇದೀಗ ಜಗದೀಶ್ ಶೆಟ್ಟರ್ ಕೂಡ ವೀರಶೈವ ಲಿಂಗಾಯಿತ ಮುಖಂಡರ ಸಭೆ ನಡೆಸಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೊಟೆಲ್ ನಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶೆಟ್ಟರ್ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಮುಖಂಡರು ಶಪಥ ಮಾಡಿದ್ದಾರೆ.

ಬಿಜೆಪಿಯಲ್ಲಾದ ಅಪಮಾನ, ನೋವಿನಿಂದ ಬೇಸತ್ತು ಕಾಂಗ್ರೆಸ್ ಸೇರಿದ್ದು, ಈ ಹಿಂದಿನಂತೆಯೇ ವೀರಶೈವ ಲಿಂಗಾಯಿತ ನಾಯಕರು ತಮಗೆ ಬೆಂಬಲ ನೀಡಬೇಕು ಎಂದು ಜಗದೀಶ್ ಶೆಟ್ಟರ್ ಮನವಿ ಮಾಡಿದ್ದಾರೆ. ಇದಕ್ಕೆ ಲಿಂಗಾಯಿತ ಮುಖಂಡರು ಸಮ್ಮತಿಸುವ ಮೂಲಕ ಶೆಟ್ಟರ್ ಗೆ ಬೆಂಬಲ ನೀಡಿದ್ದಾರೆ.

ಬಂಗಾರೇಶ್ ಹಿರೇಮಠ, ರಾಜಶೇಖರ ಮೆಣಸಿನಕಾಯಿ, ಮಾಜಿ ಸಂಸದ ಐ.ಜಿ.ಸನದಿ, ಅನೀಲ ಕುಮಾರ್ ಪಾಟೀಲ್ ಸೇರಿದಂತೆ ಹಲವು ಮುಖಂಡರು ಶೆಟ್ಟರ್ ಸಭೆಯಲ್ಲಿ ಭಾಗಿಯಾಗುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read