HomeKarnatakaBIG NEWS: ಬಿಜೆಪಿ ಪರ ಕಿಚ್ಚ ಸುದೀಪ್ ಪ್ರಚಾರಕ್ಕೆ ಮುಹೂರ್ತ ನಿಗದಿ

BIG NEWS: ಬಿಜೆಪಿ ಪರ ಕಿಚ್ಚ ಸುದೀಪ್ ಪ್ರಚಾರಕ್ಕೆ ಮುಹೂರ್ತ ನಿಗದಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಾವು ಬೆಂಬಲಿಸುವುದಾಗಿ ಖ್ಯಾತ ನಟ ಕಿಚ್ಚ ಸುದೀಪ್ ಸಿಎಂ ಜೊತೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಅಲ್ಲದೆ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹಾಗೂ ಬೊಮ್ಮಾಯಿ ಅವರು ಹೇಳಿದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು.

ಇದೀಗ ಸುದೀಪ್ ಪ್ರಚಾರಕ್ಕೆ ಮುಹೂರ್ತ ನಿಗದಿಯಾಗಿದ್ದು, ಏಪ್ರಿಲ್ 14 ರಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣಕ್ಕಿಳಿಯಲಿರುವ ಶಿಗ್ಗಾಂವಿ ಜೊತೆಗೆ ಇನ್ನೂ ಕೆಲ ಕ್ಷೇತ್ರಗಳಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಸುದೀಪ್ ಅವರು ಪತ್ರಿಕಾಗೋಷ್ಠಿಯಲ್ಲಿ ಎಲ್ಲಿಯೂ ಬಿಜೆಪಿಯನ್ನು ಬೆಂಬಲಿಸುವುದಾಗಿ ಹೇಳಿರಲಿಲ್ಲ. ತಮಗೆ ಆತ್ಮೀಯರಾಗಿರುವ ಬೊಮ್ಮಾಯಿ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನನ್ನನ್ನು ಬೆಂಬಲಿಸಿದರೆ ಬಿಜೆಪಿಯನ್ನು ಬೆಂಬಲಿಸಿದಂತೆ ಎಂದಿದ್ದರು. ಹೀಗಾಗಿ ಯಾವ್ಯಾವ ಕ್ಷೇತ್ರದಲ್ಲಿ ಸುದೀಪ್ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular