BIG NEWS: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದರೂ ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ಇನ್ನೂ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಈ ನಡುವೆ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಕೂಡ ಮುಂದೂಡಿಕೆಯಾಗಿದೆ.

ಇಂದು ಸಂಜೆ 6 ಗಂಟೆಗೆ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆಯಾಗಿದ್ದು, ನಾಳೆ ಬೆಳಿಗ್ಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಇಂದು ಸಂಜೆ ಬಿಜೆಪಿ ವೀಕ್ಷಕರ ತಂಡ ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಬೆಳಿಗ್ಗೆ 9 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ವಿಪಕ್ಷ ನಾಯಕ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read