HomeKarnatakaBIG NEWS: ಬಿಜೆಪಿ ಶ್ರೀರಾಮ, ಹನುಮನ ಹೆಸರಲ್ಲೂ ರಾಜಕೀಯ ಮಾಡುತ್ತಿದೆ; ಅಶೋಕ್ ಗೆಹ್ಲೋಟ್ ವಾಗ್ದಾಳಿ

BIG NEWS: ಬಿಜೆಪಿ ಶ್ರೀರಾಮ, ಹನುಮನ ಹೆಸರಲ್ಲೂ ರಾಜಕೀಯ ಮಾಡುತ್ತಿದೆ; ಅಶೋಕ್ ಗೆಹ್ಲೋಟ್ ವಾಗ್ದಾಳಿ

ಮಂಗಳೂರು: ರಾಜ್ಯ ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಇಂತಹ ಭ್ರಷ್ಟ ಸರ್ಕಾರ ಕಂಡಿರಲಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿದ ಅಶೋಕ್ ಗೆಹ್ಲೋಟ್, ಬಿಜೆಪಿ ಶ್ರೀರಾಮ, ಹನುಮನ ಹೆಸರಲ್ಲಿಯೂ ರಾಜಕೀಯ ಮಾಡುತ್ತಿದೆ. ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕ ರಾಜ್ಯದ ಹೆಸರಿಗೆ ಬಿಜೆಪಿ ಸರ್ಕಾರ ಕಳಂಕ ತಂದಿದೆ. 40% ಕಮಿಷನ್ ಸರ್ಕಾರ ಎಂದು ಇಡೀ ದೇಶದಲ್ಲಿಯೇ ಗುರುತಿಸಲಾಗುತ್ತಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಯಾವುದೇ ಅಭಿವೃದ್ಧಿ ಪೂರಕ ಅಂಶಗಳು ಇಲ್ಲ. ಕರ್ನಾಟಕದ ಜನತೆ ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular