BIG NEWS: ಬಿಟ್ಟಿ ಭಾಗ್ಯಗಳನ್ನು ಹೇಳಿ ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ; ಸಂಸದ ಮುನಿಸ್ವಾಮಿ ಆಕ್ರೋಶ

On women's day, BJP MP pulls up woman vendor for not wearing bindi - The  Hindu

ಕೋಲಾರ: ಗ್ಯಾರಂಟಿ ಭರವಸೆ ನೀಡಿದ್ದು ಕಾಂಗ್ರೆಸ್ ನವರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೇಳಿ ಮಾತು ಕೊಟ್ಟಿದ್ದೀರಿ. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಬಗ್ಗೆ ಹೇಳಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಸಂಸದ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಸ್ವಾಮಿ, ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ಹೋಗಿ ಕೇಳಲಿ, ಅದನ್ನು ಬಿಟ್ಟು ಜನರ ದಾರಿ ತಪ್ಪಿಸಿ ಮೋದಿ ಮೇಲೆ ಗೂಬೆ ಕೂರಿಸಿ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ 170 ರೂಪಾಯಿ ಅಲ್ಲ, 340 ರೂಪಾಯಿ ನೀಡಬೇಕು. ಅಲ್ಲಿಯವರೆಗೂ ನಾವು ಬಿಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ. ಗುತ್ತಿಗೆದಾರರು 60% ಕಮಿಷನ್ ಎಂದು ಆರೋಪಿಸುತ್ತಿದ್ದಾರೆ. ಕಮಿಷನ್ ಪಡೆಯಲು ಸುರ್ಜೇವಾಲ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ ಎಂದು ಆರೋಪಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read