BIG NEWS: ಬಿ.ಎಲ್. ಸಂತೋಷ್ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನನ್ನನ್ನು ಸೋಲಿಸಲು ಬಿಜೆಪಿ ನಾಯಕರು ಷಡ್ಯಂತ್ರ ನಡೆಸಿದ್ದಾರೆ. ನಾನು ಗೆದ್ದರೆ ರಾಜ್ಯದಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಇದೇ ಕಾರಣಕ್ಕೆ ಬಿಜೆಪಿಯವರು ನನ್ನನ್ನು ಸೋಲಿಸಬೇಕು ಎಂದು ರಣತಂತ್ರ ಹೆಣೆದಿದ್ದಾರೆ ಎಂದು ಹುಬ್ಬಳ್ಳಿ-ಧರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ನಾನು ಕಾಂಗ್ರೆಸ್ ಸೇರಿದ ಬಳಿಕ ಬಿಜೆಪಿಯವರಿಗೆ ಚಿಂತೆ ಶುರುವಾಗಿದೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ನನ್ನನ್ನು ಸೋಲಿಸಲು ಷಡ್ಯಂತ್ರ ಮಾಡಿದ್ದಾರೆ ಎಂದರು.

ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಮುಗಿಸುವ ಯತ್ನ ನಡೆದಿದೆ. ಬಿ.ಎಸ್. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರು. ಯಾವ ಕಾರಣಕ್ಕೆ ಕೆಳಗಿಳಿಸಿದರು ಎನ್ನುವುದಕ್ಕೆ ಉತ್ತರ ಇಲ್ಲ. ಈಶ್ವರಪ್ಪನವರು ಸ್ವಯಂ ನಿವೃತ್ತಿ ಘೋಷಣೆ ಮಾಡುವಂತೆ ಮಾಡಿದರು. ಬಲಾಡ್ಯರನ್ನು ಮುಗಿಸುವ ಕೆಲಸವನ್ನು ಬಿ.ಎಲ್. ಸಂತೋಷ್ ಮಾಡುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಕೂಡ ಸಂತೋಷ್ ವಿರುದ್ಧ ಮಾತನಾಡಿದ್ದರು. ಜೀ ಹುಜೂರ್ ಎನ್ನುವವರಿಗೆ ಮಾತ್ರ ಸಂತೋಷ್ ಅವಕಾಶ ಕೊಡುತ್ತಾರೆ ಎಂದು ಆರೊಪಿಸಿದ್ದಾರೆ.

ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧವೂ ಕಿಡಿ ಕಾರಿದ ಜಗದೀಶ್ ಶೆಟ್ಟರ್, 25 ಸಂಸದರಲ್ಲಿ ಪ್ರಹ್ಲಾದ್ ಜೋಶಿ ಒಬ್ಬರೇ ಕ್ಯಾಬಿನೆಟ್ ಮಿನಿಸ್ಟರ್. ಇದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read