
ಕುಮಾರಕೃಪಾ ರಸ್ತೆಯ ಚಿತ್ರಕಲಾ ಪರಿಷತ್ ಮುಂಭಾಗ ಬೃಹತ್ ಮರಗಳು ಕಾರು, ಬೈಕ್ ಗಳ ಮೇಲೆ ಬಿದ್ದಿದ್ದು, ವಾಹನಗಳು ಸಂಪೂರ್ಣ ಜಖಂಗೊಂಡಿವೆ.
ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರಂ, ಕಾಮಾಕ್ಷಿಪಾಳ್ಯ, ಗಿರಿನಗರ, ಆರ್.ಆರ್.ನಗರ, ಜಯನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಜೆ.ಪಿ.ನಗರ ಸೇರಿದಂತೆ ಮಹಾನಗರದಾದ್ಯಂತ ಬಿರುಗಾಳಿ, ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಭಾರಿ ಮಳೆಯಿಂದಾಗಿ ಬೆಂಗಳೂರಿನ ಪ್ರಮುಖ ರಸ್ತೆಗಳು ನದಿಯಂತಾಗಿದ್ದು, ಬೀದಿಬದಿ ವ್ಯಾಪಾರಿಗಳು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

