ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಚಾಮರಾಜಪೇಟೆ, ಶಿವಾಜಿನಗರ, ಸರ್ವಜ್ಞನಗರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ ಅಹ್ಮದ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಅವರು ಸೋಲನುಭವಿಸಿದ್ದಾರೆ. ಶಿವಾಜಿನಗರದಲ್ಲಿ ಕೈ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆಲುವಿನ ನಗೆ ಬೀರಿದ್ದಾರೆ.
ಸರ್ವಜ್ಞ ನಗರದಲ್ಲಿ ಮಾಜಿ ಸಚಿವ ಕಾಂಗ್ರೆಸ್ ನಾಯಕ ಕೆ.ಜೆ.ಜಾರ್ಜ್ ಗೆದ್ದು ಬೀಗಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.