BIG NEWS: ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ; ಕಂಗಾಲಾದ ವಿದ್ಯಾರ್ಥಿಗಳು, ಶಿಕ್ಷಕರು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಿಕ್ಷಕರು, ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಆತಂಕಕ್ಕೀಡಾದ ಘಟನೆ ನಡೆದಿದೆ.

ಬೆಂಗಳೂರಿನ ರಾಜಾಜಿನಗರದಲ್ಲಿರುವ NAFL ಶಾಲೆಗೆ ಬಾಂಬ್ ಇಡಲಾಗಿದೆ ಎಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಇ ಮೇಲ್ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಶಾಲಾ ಆವರಣದಲ್ಲಿ 4 ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದೆ ಎಂದು ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ ತಕ್ಷಣ ಶಾಲೆಯ ಆಡಳಿತ ಮಂಡಳಿ ಬಸವೇಶ್ವರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಮಕ್ಕಳನ್ನು ಹಾಗೂ ಶಿಕ್ಷಕರನ್ನು ಶಾಲೆಯಿಂದ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ. ಬಾಂಬ್ ಪತ್ತೆದಳ ಹಾಗೂ ಶ್ವಾನದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read