BIG NEWS: ಬೆಂಗಳೂರು-ಚೆನ್ನೈ ನಡುವೆ 8 ರೈಲು ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

ಬೆಂಗಳೂರು: ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್ ರಿಪೇರಿ ಹಿನ್ನೆಲೆಯಲ್ಲಿ ಚೆನ್ನೈ-ಬೆಂಗಳೂರು ಮಾರ್ಗದ 8 ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೋಲಾರದ ಮಾಲೂರು ತಾಲೂಕಿನ ಬ್ಯಾಟರಾಯನ ಹಳ್ಳಿ ಬಳಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆಸಲಾಗುತ್ತಿದ್ದು, ಬೆಂಗಳೂರು-ಚೆನ್ನೈ, ಚೆನ್ನೈ-ಬೆಂಗಳೂರು ಮಾರ್ಗದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಮಾರಿಕುಪ್ಪಂ- ಬೆಂಗಳೂರು, ಬೆಂಗಳೂರು ಮೈಸೂರು ತಿರುಪತಿ, ಬೆಂಗಳೂರು ಚೆನ್ನೈ, ಜೋಲಾರ್ ಪೇಟ್ ಬೆಂಗಳೂರು ಸೇರಿದಂತೆ ಸುಮಾರು 8 ರೈಲು ಸಂಚಾರಗಳನ್ನು ಬಂದ್ ಮಾಡಲಾಗಿದೆ.

ಇದರಿಂದಾಗಿ ಬೆಂಗಳೂರು, ಚೆನ್ನೈ, ಕೋಲಾರ, ಕೆಜಿಎಫ್, ಮಾರಿಕುಪ್ಪಂ, ಬಂಗಾರಪೇಟೆ ಈ ಭಾಗದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಪ್ರತಿದಿನ ಕೋಲಾರದಿಂದ ಬೆಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದ ಸಾವಿರಾರು ಜನರು ಪರದಾಡುವಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read