HomeKarnatakaBIG NEWS: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

BIG NEWS: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಚಂಡಮಾರುತದ ಪರಿಣಾಮವಾಗಿ ಈಗಾಗಲೇ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 4ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular