BIG NEWS: ಬ್ಯಾಂಕ್‌ ಕೆಲಸವಿದ್ದರೆ ಮೊದಲೇ ಮುಗಿಸಿಕೊಳ್ಳಿ; ದೇಶಾದ್ಯಂತ 2 ದಿನ ಬ್ಯಾಂಕ್ ಮುಷ್ಕರ…..!

ಬ್ಯಾಂಕ್  ಖಾತೆ ಹೊಂದಿರುವ ಗ್ರಾಹಕರಿಗೆ ದೊಡ್ಡ ಸುದ್ದಿಯೊಂದಿದೆ. ಈ ತಿಂಗಳ ಕೊನೆಯಲ್ಲಿ ಬ್ಯಾಂಕ್‌ಗೆ ಸಂಬಂಧಿಸಿದ ಯಾವುದೇ ಕೆಲಸವಿದ್ದರೆ ಅದನ್ನು ಮೊದಲೇ ಮುಗಿಸಿಕೊಳ್ಳಿ. ಯಾಕಂದ್ರೆ  ಜನವರಿ 28 ರಿಂದ ಜನವರಿ 31 ರವರೆಗೆ ಬ್ಯಾಂಕಿಂಗ್ ವಹಿವಾಟಿಗೆ ತೊಂದರೆಯಾಗಬಹದು. ಬ್ಯಾಂಕ್ ಯೂನಿಯನ್ 2 ದಿನಗಳ ಕಾಲ ಮುಷ್ಕರ ನಡೆಸಲು ನಿರ್ಧರಿಸಿದ್ದು, ವಹಿವಾಟಿಗೆ ತೊಡಕುಂಟಾಗಲಿದೆ. ಜನವರಿ 28, ತಿಂಗಳ ನಾಲ್ಕನೇ ಶನಿವಾರ, ಈ ಕಾರಣದಿಂದಾಗಿ ಬ್ಯಾಂಕುಗಳು ಮುಚ್ಚಿರುತ್ತವೆ.

ಭಾನುವಾರದ ಕಾರಣ ಜನವರಿ 29 ರಂದು ದೇಶಾದ್ಯಂತ ಬ್ಯಾಂಕುಗಳಿಗೆ ರಜಾ ಇರುತ್ತದೆ. ಬ್ಯಾಂಕ್ ಯೂನಿಯನ್ ಜನವರಿ 30 ಮತ್ತು 31 ರಂದು ಮುಷ್ಕರವನ್ನು ಘೋಷಿಸಿದೆ. ಹಾಗಾಗಿ ಗ್ರಾಹಕರು 4 ದಿನಗಳ ಕಾಲ ತೊಂದರೆ ಅನುಭವಿಸಬೇಕಾಗುತ್ತದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್‌ಬಿಯು) ಸಭೆ ಮುಂಬೈನಲ್ಲಿ ನಡೆದಿದ್ದು, ಎರಡು ದಿನಗಳ ಕಾಲ ಮುಷ್ಕರ ನಡೆಸಲು ಬ್ಯಾಂಕ್ ಒಕ್ಕೂಟಗಳು ನಿರ್ಧರಿಸಿವೆ.

ವಾರದಲ್ಲಿ 5 ದಿನಗಳ ಕಾಲ ಬ್ಯಾಂಕಿಂಗ್ ಕೆಲಸ ಮಾಡಬೇಕು ಎಂಬುದು ಬ್ಯಾಂಕ್ ಒಕ್ಕೂಟಗಳ ಬೇಡಿಕೆ. ಇದರೊಂದಿಗೆ ಪಿಂಚಣಿ ನವೀಕರಣದ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ. ಎನ್ ಪಿಎಸ್ ರದ್ದುಪಡಿಸಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದ್ದಾರೆ. ಎಲ್ಲ ಕೇಡರ್‌ಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕೆಂಬ ಒತ್ತಾಯವೂ ಕೇಳಿ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read