BIG NEWS: ಭೀಕರ ಕಾರು ಅಪಘಾತ; ಮೆಸ್ಕಾಂ ಜೆಇ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೆಸ್ಕಾಂ ಜೆಇ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಕನಹಳ್ಳಿ ಬಳಿ ನಡೆದಿದೆ.

ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಬಳಿ ಬರುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೆಸ್ಕಾಂ ಜೆಇ ಹಾಗೂ ಇನ್ನೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೆಸ್ಕಾಂ ಜೆಇ ಕಿರಣ್ (32) ಹಾಗೂ ನಾಗರಾಜ್ (49) ಮೃತರು. ಮೃತ ಕಿರಣ್ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವರು. ನಾಗರಾಜ್ ಅಜ್ಜಂಪುರ ತಾಲೂಕಿನವರಾಗಿದ್ದಾರೆ. ಇನ್ನು ಮೃತ ಕಿರಣ್ ಗೆ ಮುಂದಿನ ತಿಂಗಳು ಫೆಬ್ರವರಿ 8ರಂದು ಮದುವೆ ನಿಶ್ಚಯವಾಗಿತ್ತು ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read