BIG NEWS: ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ; ರಾಜಧಾನಿಯ 300 ಸ್ಥಳಗಳಲ್ಲಿ ಏಕಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಚಾಲನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏಕಕಾಲದಲ್ಲಿ 300 ಕಡೆಗಳಲ್ಲಿ ಪ್ರತಿಭಟನೆಗೆ ಚಾಲನೆ ನೀಡಿದೆ.

ಬೆಂಗಳೂರಿನ 300 ಸ್ಥಳಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಎಂಬ ಘೋಷವಾಕ್ಯದಡಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಟ್ರಿನಿಟಿ ಸರ್ಕಲ್ ಬಳಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರಿನ 250 ಸಿಗ್ನಲ್, 26 ಫ್ಲೈಓವರ್, 25 ಮೆಟ್ರೋ ನಿಲ್ದಾಣ ಹಾಗೂ ಮಾಲ್ ಗಳ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳು, ರಸ್ತೆ ಗುಂಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read