HomeKarnatakaBIG NEWS: ಮಂತ್ರಿ ಮಾಲ್ ಮೇಲೆ BBMP ಅಧಿಕಾರಿಗಳ ದಾಳಿ

BIG NEWS: ಮಂತ್ರಿ ಮಾಲ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು: ತೆರಿಗೆ ಪಾವತಿ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಮಂತ್ರಿ ಮಾಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿಗಳು ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿದ್ದಾರೆ.

ಕಳೆದ 6 ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟದೆ ವಂಚನೆ ಎಸಗುತ್ತಿದೆ ಎಂದು ಬಿಬಿಎಂಪಿ ಆರೋಪಿಸಿದೆ. 49 ಕೋಟಿ ರೂಪಾಯಿ ತೆರಿಗೆ ಪಾವತಿಸಬೇಕಿದೆ ಎನ್ನಲಾಗಿದೆ. ಹಲವು ಬಾರಿ ನೋಟೀಸ್ ನೀಡಿದರೂ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಅಧಿಕಾರಿಗಳು ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂತ್ರಿ ಮಾಲ್ ನ ಕಚೇರಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಖುರ್ಚಿ, ಟೇಬಲ್, ಕಂಪ್ಯೂಟರ್ ಸೇರಿ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular