BIG NEWS: ಮತದಾರರನ್ನು ಸೆಳೆಯಲು ಹಂಚಿದ್ದ ಕುಕ್ಕರ್ ಸ್ಫೋಟ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಆಮಿಷವೊಡ್ಡುತ್ತಿದ್ದು, ಅವಘಡವೊಂದು ಸಂಭವಿಸಿದೆ. ಮತದಾರರನ್ನು ಸೆಳೆಯಲು ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮದಲ್ಲಿ ನಡೆದಿದೆ.

ಶಾನುವಳ್ಳಿಯ ದೇವರಾಜ್ ಎಂಬುವವರ ಮನೆಯಲ್ಲಿ ಕುಕ್ಕರ್ ಸ್ಫೋಟಗೊಂಡಿದೆ. ಈ ಕುಕ್ಕರ್ ರಾಜಕೀಯ ನಾಯಕರು ಮತದಾರರನ್ನು ಸೆಳೆಯಲೆಂದು ನೀಡಿದ್ದ ಕುಕ್ಕರ್ ಆಗಿದ್ದು, ತರಕಾರಿ ಬೇಯಿಸಲು ಇಟ್ಟಿದ್ದಾಗ ಕುಕ್ಕರ್ ಸಿಡಿದಿದೆ.

ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read