BIG NEWS: ಮತದಾರರಿಗೆ ಪ್ರವಾಸದ ಆಮಿಷ; ನಾಲ್ಕು ಬಸ್ ಜಪ್ತಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದಕ್ಕಾಗಿ ತರಲಾಗಿದ್ದ ಕುಕ್ಕರ್, ಸೀರೆ, ಚಿನ್ನಾಭರಣ ಮೊದಲಾದವುಗಳನ್ನು ಚುನಾವಣಾ ಅಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ.

ಇದರ ಮಧ್ಯೆ ಮತದಾರರಿಗೆ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಸಹ ಕೆಲವರು ಏರ್ಪಡಿಸಿದ್ದು, ಹೀಗೆ ಧರ್ಮಸ್ಥಳಕ್ಕೆ ಕಳುಹಿಸಿಕೊಡಲಾಗಿದ್ದ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಲಾಗಿದೆ.

ಮಧುಗಿರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಈ ಬಸ್ಸುಗಳ ವ್ಯವಸ್ಥೆ ಮಾಡಿದ್ದರು ಎನ್ನಲಾಗಿದ್ದು, ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಗಿಡದಾಗಲ ಹಳ್ಳಿ ಬಳಿ ಬಸ್ಸುಗಳನ್ನು ಜಪ್ತಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read