BIG NEWS: ಮತ್ತೆ ಸಿಎಂ ಕನಸು ಬಿಚ್ಚಿಟ್ಟ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ವರುಣಾ ಅಖಾಡ ರಂಗೇರಿದೆ. ವಿಪಕ್ಷ ನಾಯಕ, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಸ್ಯಾಂಡಲ್ ವುಡ್ ನ ನಟ-ನಟಿಯರು ಅಬ್ಬರದ ಪ್ರಚಾರ ನಡೆಸಿದ್ದಾರೆ.

ಈ ವೇಳೆ ಚಿಕ್ಕಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮತ್ತೆ ಸಿಎಂ ಹುದ್ದೆ ಕನಸು ಬಿಚ್ಚಿಟ್ಟಿದ್ದಾರೆ. ವರುಣಾ ಕ್ಷೇತ್ರದಲ್ಲಿ 20೦8ರಲ್ಲಿ ಗೆದ್ದು ವಿಪಕ್ಷ ನಾಯಕನಾಗಿದ್ದೆ. 2013ರಲ್ಲಿ ಗೆದ್ದು ಮುಖ್ಯಮಂತ್ರಿಯಾಗಿದ್ದೆ. ಈಗ ಮತ್ತೊಂದು ಅವಕಾಶ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಹುದ್ದೆ ಜಪ ಮಾಡಿದ್ದಾರೆ.

ವರುಣಾದಲ್ಲಿ ಪ್ರಚಾರದ ವೇಳೆ ಜನರು ಉತ್ತಮವಾಗಿ ಸ್ಪಂದಿಸಿದ್ದಾರೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ನಾನು ವರುಣಾದಲ್ಲಿ ಗೆಲ್ಲುವುದು ಅಷ್ಟೇ ಸತ್ಯ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read