BIG NEWS: ಮಳೆ ಅವಾಂತರ; ಕೆಸರಲ್ಲಿ ಸಿಲುಕಿಕೊಂಡ ಪ್ರಧಾನಿ ಮೋದಿ ಭದ್ರತಾ ಹೆಲಿಕಾಪ್ಟರ್

ಸಿಂಧನೂರು: ಭಾರಿ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ನಿಲ್ಲಿಸಿದ್ದ ಹೆಲಿಪ್ಯಾಡ್ ಸಂಪೂರ್ಣ ಜಲಾವೃತಗೊಂಡು ಹೆಲಿಕಾಪ್ಟರ್ ಸಿಲುಕಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊಸಳ್ಳಿ ಕ್ಯಾಂಪ್ ನಲ್ಲಿ ನಡೆದಿದೆ.

ಸಿಂಧನೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದು, ಮತಬೇಟೆ ನಡೆಸಿದ್ದಾರೆ. ಇದೇ ವೇಳೆ ರಾಯಚೂರಿನ ಹಲವೆಡೆಗಳಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸಂಭವಿಸಿವೆ. ಪ್ರಧಾನಿ ಮೋದಿಯವರ ಭದ್ರತೆಗಾಗಿ ಆಗಮಿಸಿದ್ದ ಸಿಬ್ಬಂದಿಗಳಿದ್ದ ಬೆಂಗಾವಲು ಹೆಲಿಕಾಪ್ಟರ್ ನಿಲ್ಲಿಸಿದ್ದ ಹೆಲಿಪ್ಯಾಡ್ ಸಂಪೂರ್ಣ ಜಲಾವೃತಗೊಂಡಿದೆ.

ಭದ್ರತಾ ಸಿಬ್ಬಂದಿಯ ಹೆಲಿಕಾಪ್ಟರ್ ಕೆಸರು ಗದ್ದೆಯಲ್ಲಿ ಸಿಲುಕಿದ್ದು, ಹೆಲಿಕಾಪ್ಟರ್ ಮೇಲಕೆತ್ತಲು ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ. ಆದರೆ ಕೆಸರು ಗದ್ದೆಯಿಂದ ಹೆಲಿಕಾಪ್ಟರ್ ಮೇಲಕೆತ್ತುವುದೇ ಹರಸಾಹಸವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read