HomeAgricultureBIG NEWS: ಮಳೆ ಕೈಕೊಟ್ಟ ಹಿನ್ನೆಲೆ; ನೊಂದ ರೈತ ಮಹಿಳೆ ಆತ್ಮಹತ್ಯೆಗೆ ಶರಣು

BIG NEWS: ಮಳೆ ಕೈಕೊಟ್ಟ ಹಿನ್ನೆಲೆ; ನೊಂದ ರೈತ ಮಹಿಳೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ ಮಳೆ ಕೊರತೆ ಇನ್ನೊಂದೆಡೆ ಸಾಲ ಬಾಧೆ… ಇದರಿಂದ ನೊಂದ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಗಮವ್ವಾ ಬಾಗಿ ಮೃತ ರೈತ ಮಹಿಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲ ಬಾಧೆಯಿಂದ ಅದಾಗಲೇ ಬೆಸತ್ತಿದ್ದ ರೈತ ಮಹಿಳೆ ಈ ಬಾರಿ ಮಳೆ ಇಲ್ಲದೇ ಬಿತ್ತಿದ ಬೆಳೆಯೂ ಕೈಗೆ ಸಿಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ನೊಂದಿದ್ದರು. ಇದರಿಂದ ದಿಕ್ಕು ತೋಚದೇ ಮಹಿಳೆ ನಾಲ್ವರು ಮಕ್ಕಳನ್ನು ಅನಥಾವಾಗಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular