BIG NEWS: ಮಹಿಳಾ ಗ್ರಾಮಲೆಕ್ಕಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ


ಮೈಸೂರು: ಮಹಿಳಾ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

ಶಾನುಬೋಗನಹಳ್ಳಿ ವಲಯದ ಗ್ರಾಮ ಲೆಕಾಧಿಕಾರಿ 25 ವರ್ಷದ ಕೃಷ್ಣಾಬಾಯಿ ತುಕಾರಾಂ ಪಡ್ಕೆ ಮೃತ ಮಹಿಳೆ. ಮೂಲತ: ಬೆಳಗಾವಿ ಜಿಲ್ಲೆ ಅಥಣಿ ಮೂಲದ ಕೃಷ್ಣಾಬಾಯಿ ಒಂದು ತಿಂಗಳ ಹಿಂದಷ್ಟೇ ಬೆಳಗಾವಿಯ ಸುಭಾಷ್ ಬೋಸ್ಲೆ ಎಂಬುವವರನ್ನು ವಿವಾಹವಾಗಿದ್ದರು. ಸುಭಾಷ್ ಬೋಸ್ಲೆ ಹನೂರಿನ ಅರಣ್ಯ ಇಲಾಖೆ ಫಾರೆಸ್ಟ್ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ನಾಲ್ಕು ದಿನಗಳ ಹಿಂದಷ್ಟೇ ಕೆಲಸಕ್ಕೆ ಮರಳಿದ್ದ ಕೃಷ್ಣಾಬಾಯಿ ಸಹೋದ್ಯೋಗಿ ಗ್ರಾಮ ಲೆಕ್ಕಾಧಿಕಾರಿ ಚೈತ್ರ ಹಾಗೂ ಆಕೆಯ ತಾಯಿ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಈಗ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಕೃಷ್ಣಾಬಾಯಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read