HomeKarnatakaBIG NEWS: ಮಹಿಳೆಯರಿಗೆ 2000 ರೂಪಾಯಿ; ಗೃಹ ಲಕ್ಷ್ಮಿ ಯೋಜನೆ ಘೋಷಿಸಿದ ಡಿ.ಕೆ. ಶಿವಕುಮಾರ್

BIG NEWS: ಮಹಿಳೆಯರಿಗೆ 2000 ರೂಪಾಯಿ; ಗೃಹ ಲಕ್ಷ್ಮಿ ಯೋಜನೆ ಘೋಷಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ʼನಾ ನಾಯಕಿʼ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಹಣ ವಿತರಿಸಲಾಗುವುದು ಎಂದರು.

ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸಲಾಗುವುದು. ಅಲ್ಲದೇ ಮಹಿಳೆಯರಿಗೆ ಮೀಸಲಾತಿ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದರು. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆಗಳನ್ನು ಘೋಷಿಸುತ್ತಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular